ಸರ್ ಎಂ. ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ : ಮೋದಿ

61
firstsuddi

ಚಿಕ್ಕಬಳ್ಳಾಪುರ : ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.

ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಿದ ಅವರು, ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ ಎಂದು ಹೇಳಿದರು.

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ. ಬಡವರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ. ಬಿಜೆಪಿಯವರ ತೊಂದರೆಯನ್ನು ಬಿಜೆಪಿ ಅರಿತು ಅದಕ್ಕೆ ಪರಿಹಾರವನ್ನು ಕಂಡುಹಿಡಿದಿದೆ. ಆಯುಷ್ಮಾನ್ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದ ಅವರು ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಬಡವರನ್ನು ವೋಟ್ ಬ್ಯಾಂಕ್ ಎಂದು ಪರಿಗಣಸಿದ್ದ ದೇಶದ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರ ಬದಲಾಯಿಸಿದೆ. ಬಡವರ ಮಕ್ಕಳು ಕನ್ನಡದಲ್ಲಿ ವೈದ್ಯಕೀಯ ಓದುವಂತಹ ಸೌಲಭ್ಯಗಳನ್ನು ನಾವು ಕಲ್ಪಿಸಿದ್ದೇವೆ. ಸದ್ಯದಲ್ಲೇ ಕನ್ನಡ ಸೇರಿ ಎಲ್ಲಾ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್, ಇಂಜಿನಿಯರ್ ಶಿಕ್ಷಣ ಪಡೆಯಬಹುದಾಗಿದೆ ಎಂದು ತಿಳಿಸಿದರು.