ಸಸಿಕಾಂತ್ ಸೆಂಥಿಲ್ ಅವರು ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗಲಿ : ಅನಂತ್ ಕುಮಾರ್ ಹೆಗ್ಗಡೆ.

286
firstsuddi

ಬೆಂಗಳೂರು : ಇತ್ತೀಚೆಗೆ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಸಿಕಾಂತ್ ಸೆಂಥಿಲ್ ಅವರು ಕೇಂದ್ರ ಸರ್ಕಾರದ ನಿಲುವನ್ನು ಸಹಿಸಲಾಗದೆ ರಾಜೀನಾಮೆಯನ್ನು ನೀಡಿರುವುದಾಗಿ ತಿಳಿಸಿದ್ದರು. ಇದರಿಂದ ಆಕ್ರೋಶಿತಗೊಂಡ ಸಂಸದ ಅನಂತ್ ಕುಮಾರ್ ಹೆಗ್ಗಡೆ ಅವರು, ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ತಮ್ಮ ಟ್ವಿಟರ್ ಮೂಲಕ ಕಿಡಿಕಾರಿದ್ದಾರೆ. ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ ಎಂದು ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.