ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಘೋಷಣೆ…

56
firstsuddi

ಬೆಳಗಾವಿ: ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ರೈತರಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ.

ಸಿದ್ದರಾಮಯ್ಯ ಹೇಳಿದ್ದೇನು?
ಮಧ್ಯಮ ಅವಧಿ, ದೀರ್ಘಾವಧಿ ಸಾಲ ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರದ ಬಡ್ಡಿ ಮನ್ನಾ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದ ರೈತರಿಗೆ ಮಾತ್ರ ಅನ್ವಯವಾಗುತ್ತದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ.

ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್‌ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು.

ಯಡಿಯೂರಪ್ಪನವರು ಈ ರೀತಿ ಹೇಳಿದ್ದು ಇದೇ ಮೊದಲಲ್ಲ. 2009 ರಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ವಿರೋಧ ಪಕ್ಷದ ನಾಯಕರಾಗಿದ್ದ ವಿ ಎಸ್ ಉಗ್ರಪ್ಪ ಮುಂತಾದ ನಮ್ಮ ಪಕ್ಷದವರು ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾಗಲೂ ಯಡಿಯೂರಪ್ಪನವರು ಇದೇ ಮಾತುಗಳನ್ನಾಡಿದ್ದರು.

ಈ ಕುರಿತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದು, ರೈತರು ಅವಧಿಯೊಳಗೆ ಸಾಲ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು/ ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದರು.