ಸಹೋದರರ ಜೊತೆ ಸೇರಿ ಪತ್ನಿಯನ್ನೇ ಕೊಂದ ಪತಿ…

79
firstsuddi

ಬೆಳಗಾವಿ : ಸಹೋದರರ ಜೊತೆ ಸೇರಿ ಪತಿಯೇ ತನ್ನ ಪತ್ನಿಯನ್ನ ಹತ್ಯೆಗೈದಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರೇಷ್ಮಾ ರಹಿಮಾನ್ ತಾಸೆವಾಲೆ ಎಂದು ಗುರುತಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರವಾಗಿ ಮಹಿಳೆ ಹಾಗೂ ಪತಿಯ ಸಹೋದರರ ಮಧ್ಯೆ ಗಲಾಟೆ ನಡೆದಿದೆ. ಆಗ ಸಹೋದರರ ಜೊತೆಗೂಡಿ ಪತಿ ತನ್ನ ಪತ್ನಿಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ.

ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಮೃತಳ ಪತಿ ರೆಹಮಾನ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.