ಸಾರಿಗೆ ಇಲಾಖೆಗೆ ನಾಲ್ಕು ಸಾವಿರ ಕೋಟಿ ನಷ್ಟ : ಡಿಸಿಎಂ ಲಕ್ಷ್ಮಣ ಸವದಿ.

72
Firstsuddi

ಬೆಳಗಾವಿ : ಕೊರೊನಾದಿಂದಾಗಿ ಸಾರಿಗೆ ಇಲಾಖೆಗೆ ನಾಲ್ಕು ಸಾವಿರ ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವರು ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

ಕಳೆದ ಮಾರ್ಚ್ ನಿಂದ ಸುಮಾರು 4 ಸಾವಿರ ಕೋಟಿ ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದ್ದು, ಇದಕ್ಕೆ ಮುಖ್ಯ ಕಾರಣ, 20 ಜಿಲ್ಲೆಯಲ್ಲಿ ಅತಿವೃಷ್ಟಿ. ಅತಿವೃಷ್ಠಿ ಬಳಿಕ ಕೊರೊನಾ ಸಮಸ್ಯೆ, ಬಳಿಕ ಇಲಾಖೆ ಸಿಬ್ಬಂದಿ ಪ್ರತಿಭಟನೆ, ಬಳಿಕ ಮತ್ತೆ ಕೊರೊನಾ ಎರಡನೇ ಅಲೆ ಬಂದಿದ್ದರಿಂದ, ಸರ್ಕಾರದಲ್ಲಿ ಹೆಚ್ಚು ನಷ್ಟ ಸಾರಿಗೆ ಇಲಾಖೆಗೆ ಆಗಿದೆ. ಆದರೆ ಸಿಬ್ಬಂದಿಗೆ ಸಂಬಳ ನೀಡಲಾಗಿದೆ. ಈಗ ಸಾರಿಗೆಯಲ್ಲಿ ಶೇ.50 ರಷ್ಟು ಜನ ಪ್ರಯಾಣಿಸಲು ಅವಕಾಶ ಇರುವುದರಿಂದ ಬರುವ ಆದಾಯ ಸಂಬಳ ಮತ್ತು ಇಂದನಕ್ಕೆ ಸಾಕಾಗುತ್ತಿಲ್ಲ. ಇನ್ನೂ ಮೂರು ನಾಲ್ಕು ತಿಂಗಳು ಹೆಚ್ಚು ಜನರಿಗೆ ಪ್ರಯಾಣಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದರು.

ಜುಲೈ 5ರ ನಂತರ ಸಾರಿಗೆ ಇಲಾಖೆಯ ಸಿಬ್ಬಂದಿಯಿಂದ ಮತ್ತೆ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಸಾರಿಗೆ ಇಲಾಖೆ ಸಿಬ್ಬಂದಿಗೆ ಲೋಪ ಮಾಡಿರುವುದು ತಿಳಿದಿದೆ. ಸಾರ್ವಜನಿಕರಿಗೆ ತೊಂದರೆ ಆಗಬೇಕು ಹಾಗೂ ಸಾರಿಗೆ ಇಲಾಖೆಗೆ ಹಾನಿ ಆಗಬೇಕು ಎನ್ನುವ ಉದ್ದೇಶದಿಂದ ಹುನ್ನಾರ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಹುನ್ನಾರ ಮಾಡಿದ್ದು, ಯಾರು ಎಂದು ನಾ ಹೇಳಲ್ಲ ಅದು ನಿಮಗೆ ಗೊತ್ತಾಗಲಿದೆ ಎಂದಿದ್ದಾರೆ.