ಧಾರವಾಡ : ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್‌ವೊಂದು ರಸ್ತೆ ಪಕ್ಕದ ಕಂದಕಕ್ಕೆ ಇಳಿದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿ ನಡೆದಿದೆ.
ರೋಣ ಡಿಪೋದ ಬಸ್ ಧಾರವಾಡದಿಂದ ರೋಣ ಕಡೆಗೆ ತೆರಳುತ್ತಿತ್ತು. ಈ ವೇಳೆ ನವಲಗುಂದ ಪಟ್ಟಣ ಹೊರ ವಲಯದ ಕುಮಾರಗೊಪ್ಪ ಕ್ರಾಸ್ ಬಳಿ ಬೈಕ್ ಏಕಾಏಕಿ ಬಂದಿದೆ. ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಕಂದಕಕ್ಕೆ ಇಳಿದಿದೆ. ಪರಿಣಾಮ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










