ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ : ಹೆಚ್.ಡಿ. ದೇವೇಗೌಡ.

210
firstsuddi

ಬೆಂಗಳೂರು : ಯಡಿಯೂರಪ್ಪ ಅವರ ಬಳಿ ಯಾವುದೇ ರಾಜಕೀಯ ವಿಚಾರವನ್ನು ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಲೀದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಳಿ ನಾನು ಯಾವುದೇ ರಾಜಕೀಯ ಸಂಭಾಷಣೆಯನ್ನು ನಡೆಸಿಲ್ಲ. ಪುಸ್ತಕ ಮೇಳ ವಿಚಾರಕ್ಕೆ ನಾನೇ ಖುದ್ದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಅದಕ್ಕಿಂತ ಹೆಚ್ಚಾಗಿ ಮಾತನಾಡುವುದು ಏನು ಇಲ್ಲ. ಸಾರ್ವತ್ರಿಕ ಚುನಾವಣೆ ಯಾವಾಗ ಬರುತ್ತದೋ ಗೊತ್ತಿಲ್ಲ. ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಹೀಗಾಗಿ ನಾವು ಯಾರ ಪರವೂ ಇಲ್ಲ. ವಿರೋಧವೂ ಇಲ್ಲ. ನಮಗೇನು ಯಡಿಯೂರಪ್ಪ ಅವರು ಆಜನ್ಮ ಶತ್ರು ಅಲ್ಲ. ಈ ಹಿಂದೆ ನಾನು ಮತ್ತು ಸಿದ್ದರಾಮಯ್ಯ ಒಟ್ಟಾಗಿ ಹೋರಾಟ ಮಾಡಿದ್ದೇವೆ. ನಂತರ ಒಂದೇ ವೇದಿಕೆಯಲ್ಲಿ ಭಾಷಣ ಮಾಡಿದ್ದೇವೆ. ರಾಜಕೀಯದಲ್ಲಿ ಶಾಶ್ವತ ಶತ್ರುಗಳೂ ಇಲ್ಲ. ಮಿತ್ರರೂ ಇಲ್ಲ. ರಾಜಕೀಯ ಬದಲಾವಣೆಯಲ್ಲಿ ಇವೆಲ್ಲಾ ಸರ್ವೇಸಾಮಾನ್ಯ ಎಂದರು.