ಸಾಲಕ್ಕೆ ಹೆದರಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ…

211
firstsuddi

ಮಂಡ್ಯ : ಸಾಲಕ್ಕೆ ಹೆದರಿ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ. ಹಾಗಲಹಳ್ಳಿಯಲ್ಲಿ ನಡೆದಿದೆ. ರಾಜು(42) ಆತ್ಮಹತ್ಯೆ ಮಾಡಿಕೊಂಡ ರೈತ ಎನ್ನಲಾಗಿದ್ದು, ರಾಜು ಅವರು ಸ್ವಸಹಾಯ ಸಂಘದಿಂದ 1.05ಲಕ್ಷ ರೂ ಹಾಗೂ 50ಸಾವಿರ ರೂ ಕೈಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಿರುಕುಳ ತಾಳಲಾಗದೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ನಿನ್ನೆ ಸಂಜೆ ಮನೆಯವರ ಬಳಿ ಹೇಳಿ ತಮ್ಮ ಜಮೀನಿನತ್ತ ಹೋಗಿದ್ದರು ಎನ್ನಲಾಗಿದ್ದು, ಇದರಿಂದ ಆತಂಕಗೊಂಡ ಕುಟುಂಬಸ್ಥರು ಕೂಡಲೇ ಅವರನ್ನು ಹಿಂಬಾಲಿಸಿಕೊಂಡು ಹೋಗಿದ್ದರು. ಆದರೆ ಅವರು ಹೋಗುವಷ್ಟರಲ್ಲಿ ತಮ್ಮ ಜಮೀನಿನಲ್ಲಿದ್ದ ಮರವೊಂದರಲ್ಲಿ ನೇಣು ಬಿಗಿದುಕೊಂಡಿದ್ದರು ಎನ್ನಲಾಗಿದ್ದು, ಇದನ್ನು ಗಮನಿಸಿದ ಮನೆಯವರು ಕೂಡಲೇ ಅವರನ್ನು ನೇಣಿನ ಕುಣಿಕೆಯಿಂದ ಇಳಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂಧಿಸದೇ ರಾಜು ಅವರು ಮೃತಪಟ್ಟಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.