ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನೀಲಪ್ಪ ಗೊರವರ (38) ಆತ್ಮಹತ್ಯೆ ಮಾಡಿಕೊಂಡ ರೈತ. ಹೊಲದಲ್ಲಿ ಗೋವಿನ ಜೋಳ ಬೆಳೆದಿದ್ದು ಮಳೆ ಇಲ್ಲದೆ ಬೆಳೆ ನಾಶವಾಗಿದೆ. ಇದರಿಂದಾಗಿ ರೈತ ಮನನೊಂದು ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೈತನಿಗೆ ಕೆವಿಜಿ ಬ್ಯಾಂಕ್, ಕೈಗಡ ಸಾಲ ಸೇರಿ ಲಕ್ಷಾಂತರ ರೂ. ಸಾಲ ಇತ್ತು. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










