ಸಾಲಭಾದೆಯಿಂದ ಒಂದೇ ಕುಟುಂಬದ ನಾಲ್ವರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ…

152
Firstsuddi

ಬೆಳಗಾವಿ: ಸಾಲಭಾದೆಯಿಂದ ಒಂದೇ ಕುಟುಂಬದ ನಾಲ್ವರು ಜಿಲ್ಲೆಯ ರಾಯಬಾಗ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.
ಮೃತರಾದ ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಅವರು ಭಿರಡಿ ಗ್ರಾಮದವರೆಂದು ತಿಳಿದುಬಂದಿದೆ. ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.