ಸಾವಿನ ಸುಳ್ಳು ಸುದ್ದಿ ಹರಡಿ ಭಾರಿ ಸಂಚಲನ ಸೃಷ್ಟಿಸಿದ ನಟಿ ಪೂನಂ ಪಾಂಡೆ ವಿರುದ್ಧ ಎಫ್.ಐ.ಆರ್ ದಾಖಲು…

61
firstsuddi

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸಾವಿನ ಸುಳ್ಳು ಸುದ್ದಿ ಹರಡಿ ಭಾರಿ ಸಂಚಲನ ಸೃಷ್ಟಿಸಿದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಅಲಿ ಕಾಶಿಪ್ ಎಂಬ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಪಾಂಡೆ ಹಾಗೂ ಮ್ಯಾನೇಜರ್ ಇಬ್ಬರ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.

ಬೋಲ್ಡ್ ಹಾಗೂ ಸೆಕ್ಸಿ ನಡತೆ, ವಿವಾದಗಳಿಂದ ಸುದ್ದಿಯಾಗುತ್ತಿದ್ದ ಮಾಡೆಲ್ ಕಮ್ ನಟಿ ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್ ನಿಂದ ಮೃತಪಟ್ಟ ಸುಳ್ಳು ಸುದ್ದಿ ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಕೊನೆಗೆ ಪೂನಂ ಪಾಂಡೆ, ತಾನು ಬದುಕಿದ್ದೇನೆ ಇದು ಜಾಗೃತಿ ಕಾರ್ಯಕ್ರಮ ಎಂದು ಸ್ಪಷ್ಟಪಡಿಸಿದ್ದರು.

ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ, ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದಾರೆ.