ಸಾಹುಕರ್ ರಾಸಲೀಲೆ ಸಿಡಿ ಪ್ರಕರಣ : ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜಿನಾಮೆ…

114
Firstsuddi

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ ಬೆನ್ನಲ್ಲೇ ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

 ಸಿಡಿ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆದ ನಂತರ ರಾಜೀನಾಮೆ ಸಲ್ಲಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ, ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.