ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮೈತ್ರಿ ಸರ್ಕಾರವು ತಮ್ಮ ಬಹುಮತವನ್ನು ಕಳೆದುಕೊಂಡಿದ್ದು, ಆದರೂ ರಾಜ್ಯಪಾಲರು ನೀಡಿರುವ ನಿರ್ದೇಶನಕ್ಕೂ ತಲೆಕೆಡಿಸಿಕೊಳ್ಳದೆ ಸದನದಲ್ಲಿ ಸುಮ್ಮನೆ ಕಾಲಾಹರಣ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಅದಕ್ಕೆ ಆಧ್ಯತೆ ನೀಡುತ್ತಿಲ್ಲ. ಸ್ಪೀಕರ್ ರಮೇಶ್ ಕುಮಾರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಆದರಿಂದ ಸೋಮವಾರ ಮೈತ್ರಿ ಸರ್ಕಾರದಿಂದ ಬಹುಮತ ಸಾಬೀತುಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸೋಮವಾರ ಬಹುಮತ ಸಾಬೀತು ಮಾಡುವುದನ್ನು ಮುಂದೂಡಲು ನಾವು ಬಿಡುವುದಿಲ್ಲ. ಬಿಜೆಪಿ ನಾಯಕರು ಅತೃಪ್ತ ಶಾಸಕರಿಗೆ ಕೋಟಿ ಕೋಟಿ ಹಣದ ಆಮಿಷವೊಡ್ಡಿ ಮುಂಬೈಗೆ ಕಳುಹಿಸಿದ್ದಾರೆ ಎಂದ ಸಾ.ರಾ ಮಹೇಶ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದರು.










