ಚಂಢೀಗಡ : ಸಿಆರ್ಪಿಎಫ್ ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ(ಸಿಆರ್ಪಿಎಫ್)ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.
ಇಂದು ಮುಂಜಾನೆ 3.30ರ ಸುಮಾರಿಗೆ ರಾಜ್ಯ ರಾಜಧಾನಿ ರಾಯ್ ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸುಕ್ಮಾ ಜಿಲ್ಲೆಯ ಮರೈಗುಡೆಮ್ ನಲ್ಲಿರುವ ಲಿಂಗಂಪಲ್ಲಿಯ 50ನೇ ಬೆಟಾಲಿಯನ್ ನ ಶಿಬಿರದಲ್ಲಿ ಸಿಆರ್ಪಿಎಫ್ ಯೋಧರ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ. ಹೇಳಿದ್ದಾರೆ.
ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.










