ಸಿಎಂ ಎದುರೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ವಾಗ್ವಾದ…

75
firstsuddi

ರಾಮನಗರ : ಮುಖ್ಯಮಂತ್ರಿಗಳ ಎದುರೇ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಸಚಿವ ಅಶ್ಚತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಯಾರು ಮಾಡಿಲ್ಲ. ಬಿಜೆಪಿ ಪಕ್ಷ ಮಾತ್ರ ಮಾಡಿರುವುದು ಎಂದ ಭಾಷಣ ಮಾಡ್ತಿದ್ದರು.

ಈ ವೇಳೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ವೇದಿಕೆಯಲ್ಲಿಯೇ ಧರಣಿ ಕುಳಿತಿದ್ದಾರೆ. ಇದರಿಂದ ಆಕ್ರೋಶಗೊಂಡ ಅಶ್ವತ್ಥ ನಾರಾಯಣ, ಸಿಎಂ ಕಾರ್ಯಕ್ರಮಕ್ಕೆ ಅಗೌರವ ತೋರುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದಿದೆ. ಅಶ್ವತ್ಥ್ ಬಳಿಯಿದ್ದ ಮೈಕ್ ಎಂಎಲ್ಸಿ ರವಿ ಹಿಡಿದು ಎಳೆದಾಡಿದ್ದಾರೆ. ಸಿಎಂ ಸಮ್ಮುಖದಲ್ಲೇ ಕೆಲಕಾಲ ಗಲಾಟೆ ನಡೆಯಿತು. ಬಳಿಕ ಸಿಎಂ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.