ಸಿಎಂ ಕುಮಾರಸ್ವಾಮಿ ಅವರಿಗೆ ಮರುಜ್ಞಾಪನ ಪತ್ರ ಸಲ್ಲಿಸಿದ ರಾಜ್ಯಪಾಲರು…

218
firstsuddi

ಬೆಂಗಳೂರು : ವಿಶ್ವಾಸಮತ ಸಾಬೀತು ಪಡಿಸಲು ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆ ರಾಜ್ಯಪಾಲರಾದ ವಜುಭಾಯ್ ವಾಲಾ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮರುಜ್ಞಾಪನ ಪತ್ರ ಸಲ್ಲಿಸಿದ್ದು, ರಾಜ್ಯಪಾಲರು ಸಿಎಂ ಕುಮಾರಸ್ವಾಮಿ ಅವರಿಗೆ ಇಂದು ಮಧ್ಯಾಹ್ನ 1:30ರ ಒಳಗೆ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಸೂಚನೆ ನೀಡಿದ್ದರು. ಆದರೆ ರಾಜ್ಯ ಸರ್ಕಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದು, ಹೀಗಾಗಿ ರಾಜ್ಯಪಾಲರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಇಂದು ಸಂಜೆ 6ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಮರುಜ್ಞಾಪನ ಪತ್ರ ಸಲ್ಲಿಸಿದ್ದಾರೆ.