ಸಿಎಂ ಬಿಎಸ್‍ವೈಗೆ ಕೊರೊನಾ ಸೋಂಕು ; ಸರ್ವಪಕ್ಷ ಸಭೆ ಮುಂದೂಡಿಕೆ…

104
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸದ್ಯ ಸಿಎಂ ಯಡಿಯೂರಪ್ಪನವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ನಾಳೆ(ಏಪ್ರಿಲ್.18) ನಿಗದಿಯಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.

ಕೊರೊನಾ ನಿಯಂತ್ರಣ ಕುರಿತು ಚರ್ಚಿಸಲು ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದ್ದ ಉಭಯ ಸದನಗಳ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.