ಸಿಎಂ ಬೊಮ್ಮಾಯಿಯವರಿಂದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ…

81
firstsuddi

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,  ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.