ಸಿಎಂ ಬೊಮ್ಮಾಯಿ ಅವರಿಗೆ ಕೋವಿಡ್ ದೃಢ

56

ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ  ಮತ್ತೊಮ್ಮೆ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಕುರಿತು ಸ್ವತಃ ಸಿಎಂ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ.

ಸಿಎಂ ಇಂದು ಬೆಳಗ್ಗೆ 11.30ಕ್ಕೆ ದೆಹಲಿಗೆ ತೆರಳಬೇಕಿತ್ತು. ದೆಹಲಿಯಲ್ಲಿ ಸಂಜೆ ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವದ ರಾಷ್ಟ್ರೀಯ ಸಮಿತಿ ಸಭೆ, ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಬೇಕಿತ್ತು. ಆದರೆ, ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನಗಳ ದೆಹಲಿ ಪ್ರವಾಸ ರದ್ದಾಗಿದೆ.