ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಎಸ್​​ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ…

63
firstsuddi

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಇಂದು ಎಸ್​​ಡಿಪಿಐ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿಯವರು ಮಂಗಳೂರಿನಿಂದ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ದಲಿತ ವಿರೋಧಿ ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗುತ್ತಾ ಸಿಎಂ ಕಾರು ಅಡ್ಡಗಟ್ಟಲು ಯತ್ನಿಸಿದರು. ಕೂಡಲೇ ಪೊಲೀಸರು ಹಾಗೂ ಸಿಎಂ ಭದ್ರತಾ ಸಿಬ್ಬಂದಿ, ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ತಡೆದರು.