ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದ್ದು, ಸಿಎಂ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟಿದೆ.
ಈ ಸಂಬಂಧ ಭರತ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್ ನಲ್ಲಿದ್ದೇನೆ. ಇತ್ತೀಚೆಗೆ ತಮ್ಮ ಜೊತೆ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ತಪಾಸಣೆಗೆ ಒಳಪಡುವಂತೆ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.










