ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಬಿಜೆಪಿ ಶಾಸಕರ ನಿಯೋಗ…

98
firstsuddi

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಿತು.

ಸಿಎಂ ಗೃಹ ಕಚೇರಿ ಕೃಷ್ಣಾಗೆ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಭೇಟಿ ನೀಡಿತು. ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಮಂಜೂರು, ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ಮನವಿ ಮಾಡಿತು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಶಾಸಕರಾದ ಎಂ.ಪಿ ಕುಮಾರಸ್ವಾಮಿ, ಉಪ ಸಭಾಪತಿ ಪ್ರಾಣೇಶ್, ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರಿದ್ದ ನಿಯೋಗ ಕೆಲ ಕಾಲ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿತು.