ಬೆಂಗಳೂರು : ಬಿ.ಎಸ್ ಯಡಿಯೂರಪ್ಪನವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದು, ರಾಜೀನಾಮೆ ಅಂಗೀಕಾರ ಹಿನ್ನಲೆ ಸಚಿವ ಸಂಪುಟ ವಿಸರ್ಜನೆಯಾಗಿದೆ. ನೂತನ ಸಿಎಂ ನೇಮಕವಾದ ನಂತರ ಹೊಸ ಸಚಿವ ಸಂಪುಟ ರಚನೆಯಾಗಲಿದೆ.
ಇನ್ನೂ ನೂತನ ಮುಖ್ಯಮಂತ್ರಿ ಹೆಸರನ್ನು ನಾಳೆಯೇ ಘೋಷಿಸುವ ಸಾಧ್ಯತೆ ಇದ್ದು, ಗುರುವಾರ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.










