ಬೆಂಗಳೂರು : ಬಸವರಾಜ ಹೊರಟ್ಟಿ ಅವರು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಆರ್.ಟಿ.ನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಬಸವರಾಜ ಬೊಮ್ಮಾಯಿ ಅವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ ಹಾಗು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಉಪಸ್ಥಿತರಿದ್ದರು.










