ಸಿಎಎ ಬೆಂಬಲಿಸಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು…!

184
firstsuddi

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಲು ಡಿ.22 ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರ್ಯಾಲಿ ಮುಗಿಸಿಕೊಂಡು ತೆರಳುತ್ತಿದ್ದ ಹಿಂದೂ ಸಂಘಟನೆಯ ಮುಖಂಡ ವರುಣ್ ಎಂಬುವವರ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಬೈಕ್‍ನಲ್ಲಿ ಬಂದು ಲಾಂಗು, ರಾಡ್‍ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಅಕ್ಬರ್ ಪಾಷಾ, ಸನಾ ಹಾಗೂ ಸಾಧಿಕ್ ಉಲ್ ಅಮೀನ್ ಎಂಬ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ವರುಣ್ ಅವರು ಪೌರತ್ವ ತಿದ್ದುಪಡಿ ಪರ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಅವರ ಹತ್ಯೆಗೆ ಯತ್ನಿಸಲಾಗಿತ್ತು ಎಂದು ಆರೋಪಿಗಳು ತಿಳಿಸಿದ್ದಾರೆ. ಅಲ್ಲದೇ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆಸಿ ಗುಂಪನ್ನು ಚದುರಿಸುವ ಸಂಚನ್ನು ಮಾಡಿಕೊಂಡಿದ್ದರು. ಜನ ಚದರುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸ್ಪೋಟಕ ಮಾಹಿತಿ ವಿಚಾರಣೆ ವೇಳೆ ಬಹಿರಂಗವಾಗಿದೆ.