ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಚಾಲನೆ ನೀಡಿದ ಮೋದಿ.

57
firstsuddi

ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಮೋದಿ ಅವರು ಹೈದರಾಬಾದ್-ಸಿಕಂದರಾಬಾದ್ ಅವಳಿ ನಗರ ಪ್ರದೇಶದ ಉಪನಗರ ವಿಭಾಗದಲ್ಲಿ 13 ಹೊಸ ಎಂಎಂಟಿ ಎಎಸ್ ಸೇವೆಗಳಿಗೂ ಚಾಲನೆ ನೀಡಿದ್ದಾರೆ.

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ರೈಲು ನಲ್ಗೊಂಡ, ಗುಂಟೂರು, ಓಂಗೋಲ್ ಮತ್ತು ನೆಲ್ಲೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ. ಎರಡು ನಗರಗಳ ನಡುವೆ 660 ಕಿಮೀ ಅಂತರವನ್ನು ಇದು ಹೊಂದಿದೆ. ಎಕ್ಸ್ ಪ್ರೆಸ್ ರೈಲಿನಿಂದ ಪ್ರಯಾಣದ ಸಮಯ ಸುಮಾರು ಮೂರುವರೆ ಗಂಟೆಗಳಷ್ಟು ಕಡಿತವಾಗಲಿದೆ.

ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲು (20701) ಸಿಕಂದರಾಬಾದ್ ರೈಲು ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 2.30ಕ್ಕೆ ತಿರುಪತಿ ತಲುಪುತ್ತದೆ. ತಿರುಪತಿ – ಸಿಕಂದರಾಬಾದ್ ವಂದೇ ಭಾರತ್ ರೈಲು (20702) ತಿರುಪತಿ ರೈಲು ನಿಲ್ದಾಣದಿಂದ ಮಧ್ಯಾಹ್ನ 3.15 ಕ್ಕೆ ಹೊರಡುತ್ತದೆ. ರಾತ್ರಿ 11.45ಕ್ಕೆ ಸಿಕಂದರಾಬಾದ್ ತಲುಪುತ್ತದೆ.