ಗ್ಯಾಂಗ್ಟಾಕ್ : ಸಿಕ್ಕಿಂನಲ್ಲಿಂದು ಭಾರಿ ಹಿಮಕುಸಿತ ಹಿಮಪಾತ ಉಂಟಾಗಿದ್ದು, ಘಟನೆಯಲ್ಲಿ 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಗ್ಯಾಂಗ್ಟಾಕ್ ನಿಂದ ನಾಥುಲಾಗೆ ಸಂಪರ್ಕ ಕಲ್ಪಿಸುವ ಜವಾಹರಲಾಲ್ ನೆಹರು ರಸ್ತೆಯ 15ನೇ ಮೈಲಿನಲ್ಲಿ ಮಧ್ಯಾಹ್ನ 12.20ರ ಸುಮಾರಿಗೆ ಹಿಮಕುಸಿತ ಸಂಭವಿಸಿದೆ. ಈ ಪ್ರದೇಶ ಸಮುದ್ರ ಮಟ್ಟದಿಂದ 4,310 ಮೀ. (14,140 ಅಡಿ) ಎತ್ತರದಲ್ಲಿದೆ ಮತ್ತು ಇದು ಪ್ರಮುಖ ಪ್ರವಾಸಿ ತಾಣವಾಗಿದೆ.
ವರದಿಗಳ ಪ್ರಕಾರ, ಹಿಮಕುಸಿತ ಸಂಭವಿಸಿದಾಗ 150 ಕ್ಕೂ ಹೆಚ್ಚು ಪ್ರವಾಸಿಗರು ಹಿಮಪಾತದಿಂದಾಗಿ ರಸ್ತೆಯಲ್ಲಿ ಸಿಲುಕಿಕೊಂಡಿದ್ದರು. ಈ ನಡುವೆ ಹಿಮದ ಅಡಿಯಲ್ಲಿ ಸಿಲುಕಿದ ಸುಮಾರು 30 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿ ಸಿಬ್ಬಂದಿ ತೊಡಗಿದ್ದಾರೆ.










