ಬಿಹಾರ : ಸಿಡಿಲು ಬಡಿದು ಕಳೆದ 24 ಗಂಟೆಯಲ್ಲಿ 30ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದ್ದು, ಭಗಲ್ಪರ, ಮಧ್ಯೆಪುರಾ, ಮಧುಬಾನಿ, ಬೆಗುಸರೈ, ಸಹರ್ಸ, ಕಟಿಹಾರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಘಟನೆ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 4ಲಕ್ಷ ರೂ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ವರೆಗೂ ಹೀಗೆ ಸಿಡಿಲು ಬಡಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.










