ಸಿಡಿ ಕೇಸ್ – ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ…

74
firstsuddi

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತನಿಖಾ ವರದಿ ಸಲ್ಲಿಸಲು ಎಸ್ಐಟಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಅಂತಿಮ ವರದಿ ಸಲ್ಲಿಕೆಗೆ ಎಸ್ಐಟಿ ಅವಕಾಶ ಕೋರಿತ್ತು. ಸದ್ಯ ಎಸ್ಐಟಿ ತನಿಖೆ ಪ್ರಶ್ನಿಸಿರುವ ಯುವತಿಯ ಅರ್ಜಿ ಬಗ್ಗೆ ಇಂದು ವಿಚಾರಣೆ ನಡಿಸಿದ ಕೋರ್ಟ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ತನಿಖಾ ವರದಿ ಸಲ್ಲಿಸಲು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪದಿಂದಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಎಸ್ ಟಿ ಸಲ್ಲಿಸುವ ಅಂತಿಮ ವರದಿ ಮೇಲೆ ರಮೇಶ್ ಜಾರಕಿಹೊಳಿ ಭವಿಷ್ಯ ನಿಂತಿದೆ.