ಸಿಡಿ ಭೀತಿ ಹಿನ್ನಲೆ ದೆಹಲಿಗೆ ದೌಡಾಯಿಸಿದ್ರಾ ಶಾಸಕ ರೇಣುಕಾಚಾರ್ಯ?

113
firstsuddi

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದರೆ ಇನ್ನೊಂದೆಡೆ ಬಿಜೆಪಿಯಲ್ಲಿ ಸಿಡಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಂಬಂಧಪಟ್ಟ ಸಿಡಿ ಚರ್ಚೆಗೆ ಬಂದಿದ್ದು, ಈ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ದೆಹಲಿಗೆ ದೌಡಾಯಿಸಿದ್ದಾರೆ ಎನ್ನಲಾಗ್ತಿದೆ.

ದೆಹಲಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರೂ ಕೊನೆ ಕ್ಷಣದಲ್ಲಿ ನಿಲುವು ಬದಲಿಸಿ ರೇಣುಕಾಚಾರ್ಯ ಅವರು ದಿಢೀರ್ ಆಗಿ ನಿನ್ನೆ ರಾತ್ರಿ ದೆಹಲಿಗೆ ತೆರಳಿದ್ದು, ಸಿಡಿ ಷಡ್ಯಂತ್ರದ ಆತಂಕದಿಂದಲೇ ಈ ಪ್ರವಾಸ ಕೈಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇನ್ನೂ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿ ಸಂಬಂಧ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವರನ್ನು ಭೇಟಿಯಾಗುತ್ತೇನೆ. ಸಾಧ್ಯವಾದರೆ ರಾಜ್ಯ ಉಸ್ತುವಾರಿಯನ್ನು ಭೇಟಿಯಾಗುತ್ತೇನೆ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನೂ ಹೇಳಿಲ್ಲ, ಇಂದು ಯಾವ ನಾಯಕರು ಸಿಗುತ್ತಾರೋ ಅವರನ್ನು ಭೇಟಿಯಾಗುತ್ತೇನೆ. ನನ್ನ ಕ್ಷೇತ್ರದ ಯೋಜನೆಗಳ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.