ಮಂಗಳೂರು : ಆರ್ಎಸ್ಎಸ್ ಅನ್ನು ತಾಲಿಬಾನ್ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಾಲಿಬಾನ್ ಸಂಸ್ಕೃತಿ ಸಿದ್ದರಾಮಯ್ಯನವರದ್ದೇ ಎಂದು ಗುಡುಗಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಸಿಎಂ ಆಗಿದ್ದಾಗ ಅತೀ ಹೆಚ್ಚು ಕೊಲೆ, ಸುಲಿಗೆ, ಮರಣ, ನಿತ್ಯ ಗೋ ಹತ್ಯೆ ನಡೆಯುತ್ತಿತ್ತು. ಅವರಿಗೆ ಎಲ್ಲಿದೆ ನೈತಿಕತೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಈಗ ಮುಳುಗಿದ ಹಡಗು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಅನ್ನೋ ವಿಶ್ವಾಸ ಜನರಿಗಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದ ಹತ್ತಾರು ಜನ ಬಿಜೆಪಿ ಸೇರಲು ಸಿದ್ದತೆ ಮಾಡಿದ್ದಾರೆ ಎಂದರು.










