ಸಿದ್ದರಾಮಯ್ಯ ಅಕ್ರಮ ಮಾಡಿದ್ದು ಸುಳ್ಳಾ? ತಾವು ಉಡುವ ಪಂಚೆಯಷ್ಟೇ ಕ್ಲೀನ್ ಇದ್ದಾರಾ? : ಸಿ.ಟಿ ರವಿ

71
firstsuddi

ಬೆಂಗಳೂರು : ಸಿದ್ದರಾಮಯ್ಯ ಹಗಲು ದರೋಡೆ ಮಾಡಿದವರು. ಅರ್ಕಾವತಿ ರೀಡೂ ಮಾಡಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟ ಮಾಡಿದ್ದಾರೆ. ಕೈಗೆ ಹ್ಯಾಂಡ್ ಗ್ಲೌಸ್ ಹಾಕಿ ಸೈನ್ ಮಾಡಿ ಸಿದ್ದರಾಮಯ್ಯ ಅಕ್ರಮ ಮಾಡಿದ್ದಾರೆ. ಹೀಗಾಗಿ ಅವರ ಫಿಂಗರ್ ಪ್ರಿಂಟ್ ಕಾಣ್ತಾ ಇಲ್ಲ. ಆದರೆ ಅಕ್ರಮ ಮಾಡಿದ್ದು ಸುಳ್ಳಾ? ಸಿದ್ದರಾಮಯ್ಯ ತಾವು ಉಡುವ ಪಂಚೆಯಷ್ಟೇ ಕ್ಲೀನ್ ಇದ್ದಾರಾ?  ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತನ್ನ ಕೈ ಕೆಳಗಡೆ ಇರುವ ಎಸಿಬಿ ರಚನೆ ಮಾಡಿದರು. ಭೂತದ ಬಾಯಿಯಲ್ಲಿ ಭಗವದ್ಗೀತೆ ಹೇಳಿಸಿದ ಹಾಗೇ ಸಿದ್ದರಾಮಯ್ಯ ಮಾಡಿದರು. ಸಿದ್ದರಾಮಯ್ಯ ಹಗಲು ದರೋಡೆ ಮಾಡಿದವರು. ಅರ್ಕಾವತಿ ರೀಡೂ ಮಾಡಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟ ಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರ ವಿರುದ್ಧ ಪೋಸ್ಟರ್ ಮೂಲಕ ವಾರ್ ಮಾಡುತ್ತಿರುವ ಕಾಂಗ್ರೆಸ್ ನವರು ದಾಖಲೆ ಇದ್ರೆ ಕೊಡಲಿ. ತಮ್ಮ ಮೇಲಿನ ಆರೋಪಗಳನ್ನು ಮುಚ್ಚಿ ಹಾಕುವ ಸಲುವಾಗಿಯೇ ಲೋಕಾಯುಕ್ತ ಮುಚ್ಚಿದವರು ಅವ್ರು. ಇವರು ಭ್ರಷ್ಟಾಚಾರದ ಬಗ್ಗೆ ಮಾತಾಡೋದು, ಭ್ರಷ್ಟಾಚಾರ ವಿರುದ್ಧ ಹೋರಾಡೋದು ಎರಡೂ ಭೂತದ ಬಾಯಲ್ಲಿ ಭಗವದ್ಗೀತೆ ಓದಿಸಿದ ಹಾಗೆ ಎಂದು ವ್ಯಂಗ್ಯವಾಡಿದ್ದಾರೆ.

ಡಿ.ಕೆ ಶಿವಕುಮಾರ್ ಭ್ರಷ್ಟರು ಹೌದೊ? ಅಲ್ಲವೊ ? ಜನಸಾಮಾನ್ಯರ ಒಮ್ಮೆ ಕೇಳಿ. ಅಥವಾ ಮಾಧ್ಯಮದವರಾದ ನೀವೇ ಹೇಳಿ. ಡಿಕೆಶಿ ಕ್ಲೀನಾ? ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರಕ್ಕೆ ಇವರನ್ನೆಲ್ಲ ಕೇವಲ ಪರಪ್ಪನ ಅಗ್ರಹಾರಕ್ಕೆ ಹಾಕೋದಲ್ಲ. ಕಾಂಗ್ರೆಸ್ ನಾಯಕರು ತಿಹಾರ್ ಜೈಲಲ್ಲೇ ಇರಬೇಕು ಎಂದರು.

ನೀವು ಬಳಸಿದಿರಲ್ವಾ. What’s the meaning by ರೀಡೋ..? ಕೆಂಪಣ್ಣ ಆಯೋಗ ಸಿದ್ದರಾಮಯ್ಯ ಅವರೇ ನೇಮಕ ಮಾಡಿದ್ದು, ಕೆಂಪಣ್ಣ ವರದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ ಎಂದು ಹೇಳಿದೆ. ಆಗ ಸಿಎಂ ಆಗಿದ್ದು ಸಿದ್ದರಾಮಯ್ಯ. ಹಾಗಾದರೆ ಇದರ ನೈತಿಕ ಹೊಣೆ ಯಾರು ಹೊರಬೇಕು..? ಗುಂಡೂರಾವ್ ಸಿಎಂ ಆಗಿದ್ದಾಗ ಅವರ ಕಾಲಘಟ್ಟದಲ್ಲಿ ಆಗಿರುವ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಇತ್ತು ಅಂತ ನಾನು ಹೇಳಲ್ಲ. ಆದರೆ, ಇವರ ಕಾಲಘಟ್ಟದಲ್ಲಿ ಆಗಿರುವ ಹಗರಣಕ್ಕೆ ಇವರೇ ಜವಾಬ್ದಾರಿ ಹೊರಬೇಕು ಎಂದರು.

ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಸಿಎಂ ಸ್ಥಾನದಿಂದ ಕೆಳಗಡೆ ಇಳಿಸಿ ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಅವಮಾನ ಮಾಡಿಲ್ವಾ? ಎಂಬ ದಿನೇಶ್ ಗುಂಡೂರಾವ್ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ಸಿಎಂ ಮಾಡಿಲ್ಲ. ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಬಿಜೆಪಿ ಪಕ್ಷ. ನಾಲ್ಕು ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಬಿಜೆಪಿ. ಯಡಿಯೂರಪ್ಪ ಕಣ್ಣೀರು ಹಾಕಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು.