ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದರಿಂದ ಡಿ.19 ರಿಂದ ಡಿ.22ರ ರಾತ್ರಿ 12 ಗಂಟೆಯವರೆಗೂ ಕಫ್ರ್ಯೂ ಜಾರಿ ಮಾಡಲಾಗಿದ್ದು, ಹೀಗಾಗಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿ ನೀಡಿದರೆ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಗೆ ಭಂಗವುಂಟಾಗುವುದರಿಂದ ಡಿ.22ರ ರಾತ್ರಿ 12 ಗಂಟೆಯವರೆಗೂ ಮಂಗಳೂರಿಗೆ ಆಗಮಿಸದಂತೆ ನಿರ್ಬಂಧ ಹೇರಲಾಗಿದೆ.










