ಬೆಂಗಳೂರು : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ. ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿವೆ. ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಇಂತಹ ಸಂದರ್ಭದಲ್ಲಿ ಒಡಕಿನ ಮಾತುಗಳು ಆರೋಗ್ಯಕರವಲ್ಲ. ಕಾಲ ಕೂಡಿ ಬಂದಾಗ ಖಂಡಿತ ಎಲ್ಲದಕ್ಕೂ ಉತ್ತರಿಸುವೆ ಎಂದು ಟ್ವೀಟ್ ಮಾಡಿದ್ದಾರೆ.











