ಸಿದ್ದರಾಮಯ್ಯ ಅವರ ಆಪ್ತನಿಂದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಪುತ್ರಿಗೆ ಕೊಲೆ ಬೆದರಿಕೆ…

554
firstsuddi

ಮೈಸೂರು : ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಪುತ್ರಿಗೆ ಸಿದ್ದರಾಮಯ್ಯ ಅವರ ಆಪ್ತ, ಮಾಜಿ ಶಾಸಕ ಹೆಚ್.ಪಿ ಮಂಜುನಾಥ್ ಅವರು ಕೊಲೆ ಬೆದರಿಕೆ ಹಾಕಿದ್ದು, ಈ ಕುರಿತು ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರು ವಿ.ವಿ. ಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಸುಮಾ ಅವರ ದೂರಿನಲ್ಲಿ “ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ. ರವೀಂದ್ರ ಹಾಗೂ ಹೆಚ್.ಪಿ ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ ಖರೀದಿಸಿದ್ದನು. ಸ್ನೇಹಿತರಾಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಮಂಜುನಾಥ್‍ಗೆ ಬಿಟ್ಟಕೊಟ್ಟಿದ್ದನು. ರವೀಂದ್ರನ ಮರಣದ ನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದು, ಈಗ ಮನೆ ಖಾಲಿ ಮಾಡುತ್ತಿಲ್ಲ. ಮನೆ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸುಮಾ ಅವರು ಆರೋಪಿಸಿದ್ದಾರೆ.