ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ – ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ…

53
firstsuddi

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ನಿನ್ನೆ ಸಿದ್ದರಾಮಯ್ಯನವರು ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಡಿಕೇರಿಯ ತಿಮ್ಮಯ್ಯ ವೃತ್ತದಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದರು. ಶಾಂತಿಪ್ರಿಯ ಕೊಡಗಿಗೆ ಟಿಪ್ಪು ಪ್ರೇಮಿ ಸಿದ್ದರಾಮಯ್ಯ ಬರೋದು ಬೇಡ ಎಂದು ಘೋಷಣೆ ಕೂಗಿದ್ದರು. ಇದರಿಂದ ಕೆಲ ಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣ ಆಗಿತ್ತು.