ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ : ಹೆಚ್‍ಡಿಕೆ.

55
firstsuddi

ಕಲಬುರಗಿ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಕ್ಷೇತ್ರವಲ್ಲ. ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದರು.

ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ ಇಲ್ಲ ಎಂದರು.

ರಾಜ್ಯಕ್ಕೆ ನರೇಂದ್ರ ಮೋದಿ ಬಂದಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಗೆ ಭಯ ಶುರುವಾಗಿದೆ ಎಂಬ ಸಿಪಿ ಯೋಗೇಶ್ವರ್ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನರೇಂದ್ರ ಮೋದಿ ಬಂದರೆ ನಮಗ್ಯಾವ ಭಯವೂ ಇಲ್ಲ. ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರ ಆಗಲಿ ಯಾವ ಯೋಜನೆಗಳನ್ನು ಜನರಿಗೆ ಕೊಟ್ಟಿದ್ದೀರಾ ಎಂಬುದರ ಬಗ್ಗೆ ನಿಮಗೆ ಭಯವಾಗಬೇಕು ಎಂದರು.