ಬೆಂಗಳೂರು : ಇಂದು ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.
ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ತೆರೆಗೆ ಬರಲಿದೆ. ಸಿದ್ದರಾಮಯ್ಯ ಬಯೋಪಿಕ್ ಗೆ `ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಸತ್ಯ ರತ್ನಂ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ತಮಿಳು ನಟ ವಿಜಯ್ ಸೇತುಪತಿ ನಾಯಕರಾಗಿ ಅಭಿನಯಿಸಲಿದ್ದಾರೆ.
ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.










