ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ 30 ಮಂದಿ ವಿರುದ್ಧ ಎಫ್ಐಆರ್ ದಾಖಲು…

86
firstsuddi

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ಮಾಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ) ಕಾಯ್ದೆಯ ಅಡಿಯಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಕನಕಪುರದ ಕಾವೇರಿ ಸಂಗಮದಿಂದ ಆರಂಭಗೊಂಡ ಮೇಕೆದಾಟು ಪಾದಯಾತ್ರೆಯು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟೂರು ದೊಡ್ಡ ಆಲಹಳ್ಳಿ ಗ್ರಾಮಕ್ಕೆ ತಲುಪಿದೆ. ಎರಡನೇ ದಿನವಾದ ಇಂದು ಬೆಳಗ್ಗೆ 8:30ಕ್ಕೆ ದೊಡ್ಡಾಲಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದ್ದು, ಸಂಜೆ ಕನಕಪುರದಲ್ಲಿ ಮುಕ್ತಯವಾಗಲಿದೆ.