ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ – ಅಶ್ವತ್ಥ್ ನಾರಾಯಣ್ ವಿರುದ್ಧ ದೂರು ದಾಖಲು…

44
firstsuddi

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನ ರೀತಿ ಹೊಡೆದು ಹಾಕಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಸಚಿವರ ವಿರುದ್ಧ ಬೆಂಗಳೂರು, ಹುಬ್ಬಳ್ಳಿಯಲ್ಲಿ ದೂರು ದಾಖಲಾಗಿದೆ.

ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ್ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಟಿಪ್ಪು ವಂಶಸ್ಥರನ್ನ ಕೊಲೆ ಮಾಡಬೇಕು ಅಂತ ಕಟೀಲ್ ಹೇಳಿಕೆ ನೀಡಿದರೆ, ಸಿದ್ದರಾಮಯ್ಯರನ್ನ ಟಿಪ್ಪು ಹೊಡೆದು ಹಾಕಿದ ಹಾಗೆ ಹೊಡೀಬೇಕು ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹುಬ್ಬಳ್ಳಿಯ ಗೋಕುಲ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನಲ್ಲಿ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ನಿನ್ನೆ ಮಾತನಾಡಿದ್ದ ಸಚಿವ ಅಶ್ವತ್ಥ್ ನಾರಾಯಣ್, ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದರು.