ಸಿದ್ದರಾಮಯ್ಯ ಹೇಳಿದ್ದೇ ವೇದವಾಕ್ಯ ಅಲ್ಲ : ಸಿಎಂ ಗರಂ.

95
firstsuddi

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯ ಹೇಳಿದ್ದೇ ವೇದವಾಕ್ಯ ಅಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 32 ಕೊಲೆಗಳು ಆಗಿವೆ. ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ ಎಂದು ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರತ್ಕಲ್ ನಲ್ಲಿ ಕೊಲೆ ಆಗಿದೆ ಎಂಬ ಮಾಹಿತಿ ಬಂದಿದೆ. ನಿನ್ನೆ ನಾನು ಪ್ರವೀಣ್ ಮನೆಗೆ ಹೋಗಿ ವಾಪಸ್ ಬರುವಾಗ ಮತ್ತೊಂದು ಕೊಲೆ ಆಗಿದೆ. ಇದು ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ. ಎಡಿಜಿಪಿ ಲಾ ಆಂಡ್ ಆರ್ಡರ್ ಅವರಿಗೆ ಅಲ್ಲಿಯೇ ಇರಲು ಹೇಳಿದ್ದೇನೆ. ಈ ಮೂರು ಕೊಲೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದರು.

ಕೇರಳ ಭಾಗದ 55 ರಸ್ತೆಗಳಲ್ಲಿ ನಾಕಾ ಬಂದಿ ಹಾಕಿ ಖಡಕ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಯಾರೂ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕರ ಆರೋಪಗಳು ಹಾಸ್ಯಾಸ್ಪದವಾಗಿದೆ. ನಮ್ಮ ಕಾರ್ಯಕರ್ತರು ನಮ್ಮನ್ನೇ ಕೇಳ್ತಿರೋದು, ಕಾಂಗ್ರೆಸ್ ಅವರನ್ನ ಕೇಳ್ತಿಲ್ಲ ಎಂದು ಸಿಎಂ ಗರಂ ಆದರು.

10 ದಿನಗಳಲ್ಲಿ 3 ನೇ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಯೊಂದು ಕೊಲೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಡಿಜಿ, ಐಜಿಪಿ ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಕರಾವಳಿ ಭಾಗದಲ್ಲಿ ವಿಶೇಷ ಕಠಿಣ ಕ್ರಮ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇನೆ. ಕರ್ನಾಟಕದಿಂದ ಕೇರಳ ಬಾರ್ಡರ್ ಗೆ ಓಡಾಡುವ 58 ರಸ್ತೆಗಳಿವೆ. ಈ ವಿಚಾರವಾಗಿ ಉನ್ನತ ಮಟ್ಟದಲ್ಲಿ ಸಭೆ ನಡೆಸುತ್ತೇನೆ ಎಂದು ಹೇಳಿದರು.