ಸಿದ್ದೇಶ್ವರ್ ಪತ್ನಿಗೆ ಟಿಕೆಟ್ ನೀಡಿದ್ದಕ್ಕೆ ತೀವ್ರ ಆಕ್ರೋಶ- ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ…

39
firstsuddi

ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ ಬಿಡುಗಡೆ ಮಾಡಿದ್ದು, ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅದರಂತೆ ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಸಹ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಎಸ್.ಎ.ರವೀಂದ್ರನಾಥ್ ಅವರಿಗೆ ಟಿಕೆಟ್ ನಿರಾಕರಿಸಿ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಇಂದು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್ ನಿವಾಸದ ಬಳಿಯೇ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.