ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ…

92
firstsuddi

ನವದೆಹಲಿ: ಇಂದು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‍ಇ)ಯ 10ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ಸಿಬಿಎಸ್ಇ ಜುಲೈ 15ರೊಳಗೆ ಹತ್ತನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶಗಳನ್ನು ಪ್ರಕಟಿಸುವುದಾಗಿ ಈ ಮುನ್ನವೇ ಹೇಳಿತ್ತು. ಅದರಂತೆ 10ನೇ ತರಗತಿ ಫಲಿತಾಂಶಗಳು ಇಂದು ಪ್ರಕಟವಾಗುವ ಸಾಧ್ಯತೆಯಿದೆ. ಇನ್ನು 12ನೇ ತರಗತಿ ಫಲಿತಾಂಶ ಪ್ರಕಟಣೆಯ ದಿನಾಂಕವನ್ನು ಸಿಬಿಎಸ್ಇ ತಿಳಿಸಿಲ್ಲ.

ಈ ವರ್ಷ 35 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಬಿಎಸ್ಇ 10ನೇ ಮತ್ತು 12ನೇ ಬೋರ್ಡ್ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದರು.
ಸಿಬಿಎಸ್ ಇ ತನ್ನ ಅಧಿಕೃತ ವೆಬ್ ಸೈಟ್ cbresults.nic.in ಮತ್ತು results.gov.in  ನಲ್ಲಿ ಪರೀಕ್ಷೆ ಫಲಿತಾಂಶಗಳನ್ನು ಪರಿಶೀಲಿಸಬಹುದು.