ನವದೆಹಲಿ : ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ (68) ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಂಜಿತ್ ಸಿನ್ಹಾ ಅವರಿಗೆ ನಿನ್ನೆ ರಾತ್ರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
1974ನೇ ಬ್ಯಾಚ್ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದ ಸಿನ್ಹಾ ಅವರು ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ರೈಲ್ವೆ ರಕ್ಷಣಾ ಪಡೆಯ (ಆರ್ಪಿಎಫ್) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.










