ಲಕ್ನೋ : ಸಲಿಂಡರ್ ಸ್ಪೋಟಗೊಂಡು 11 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ. ಮೊಹಮ್ಮದಾಬಾದ್ ಪ್ರದೇಶದಲ್ಲಿದ್ದ ಎರಡು ಅಂತಸ್ಥಿನ ಮನೆಯೊಳಗೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆ ಕುಸಿದು ಬಿದ್ದಿದ್ದು, ಈ ವೇಳೆ 11 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬಗ್ಗೆ ಪ್ರತಿಕ್ರಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.










