ಸಿಲಿಂಡರ್ ಸ್ಫೋಟದಿಂದ ಕುಸಿದು ಬಿದ್ದ ಎರಡು ಮನೆಗಳು ; ಏಳು ಮಂದಿ ದಾರುಣ ಸಾವು…

85
firstsuddi

ಲಕ್ನೋ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗೊಂಡ ನಗರದ ವಾಸಿರ್ ಗಂಜ್ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ.

ಕಳೆದ ರಾತ್ರಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, 2 ಮನೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಸುಮಾರು 15 ಜನ ಅವಶೇಷಗಳಡಿ ಸಿಲುಕಿಕೊಂಡಿದ್ದು, ಈ ಪೈಕಿ 7 ಜನರು ಮೃತಪಟ್ಟಿದ್ದು, ಇನ್ನುಳಿದ 7 ಜನರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆಯ ಅವಶೇಷದಲ್ಲಿ ಸಿಲುಕಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ 14 ಮಂದಿಯನ್ನು ಕಾಪಾಡಲಾಗಿದೆ. 7 ಮಂದಿ ಮೃತಪಟ್ಟಿದ್ದು, ಇನ್ನು 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಸಂತೋಷ್ ಕುಮಾರ್ ಮಿಶ್ರ ತಿಳಿಸಿದ್ದಾರೆ.