ಸಿಲಿಕಾನ್ ಸಿಟಿಯಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ?

70
firstsuddi

ಬೆಂಗಳೂರು : ನಗರದಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಹೆಚ್ ಎಸ್ ಆರ್ ಲೇಔಟ್ ನ ಮುರುಗೇಶ್ ಪಾಳ್ಯದಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳಲು ಯುವತಿ ಕ್ಯಾಬ್ ಬುಕ್ ಮಾಡಿದ್ದಳಂತೆ. ಹೀಗೆ ಕ್ಯಾಬ್ ಬಂದು ಯುವತಿ ಮುಂದೆ ಬಂದು ನಿಂತಿದ್ದು, ಕ್ಯಾಬ್ ಚಾಲಕ ಯುವತಿ ಪಾನಮತ್ತಳಾಗಿರುವುದನ್ನು ಗಮನಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರ ಎಸಗಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.