ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ – ಜನಜೀವನ ಅಸ್ತವ್ಯಸ್ತ…

69
firstsuddi

ಬೆಂಗಳೂರು : ದೀಪಾವಳಿ ಸಂಭ್ರಮದಲ್ಲಿದ್ದ ಸಿಲಿಕಾನ್ ಮಂದಿಗೆ ವರುಣದೇವ ಶಾಕ್ ನೀಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಲಾಲ್‍ಬಾಗ್, ಟೌನ್‍ಹಾಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಭಾರೀ ಮಳೆಗೆ ವಾಹನ ಸವಾರರು ತತ್ತರಿಸಿ ಹೋಗಿದ್ದರು. ವಾಹನಗಳು ಮುಂದೆ ಹೋಗಲಾರದೆ ನಿಂತಲ್ಲೇ ನಿಂತಿದ್ದವು. ಈ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಯಿತು.

ದೀಪಾವಳಿ ಹಬ್ಬದ ಹಿನ್ನಲೆ ದೀಪಾ ಹಚ್ಚಿ, ಪಟಾಕಿ ಹೊಡೆಯುವ ಖುಷಿಯಲ್ಲಿರುವ ನಗರದ ಮಂದಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಡೀ ನಗರ ಅಕ್ಷರಶಃ ತತ್ತರಿಸಿ ಹೋಗಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಿದ್ದು, ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.