ಸಿ.ಟಿ ರವಿ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು…

105
firstsuddi

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಗರದ ಹನುಮಂತ ವೃತ್ತದ ಬಳಿ ನಡೆದಿದೆ.

ನಗರದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಫ್ಲೆಕ್ಸ್ ಅಳವಡಿಸಲಾಗಿತ್ತು. ಸಿ.ಟಿ ರವಿ, ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರ ಭಾವಚಿತ್ರ ಹೊಂದಿದ್ದ ಫ್ಲೆಕ್ಸ್ ನ್ನು ಯಾರೋ ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದಿದ್ದಾರೆ.

ವಿಷಯ ತಿಳಿದ ಡಿವೈಎಸ್ ಪಿ ಪುರುಷೋತ್ತಮ್ ಮತ್ತು ನಗರ ಠಾಣಾ ಪಿಎಸ್ ಐ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.