ಸಿ.ಟಿ ರವಿ ಮುಂದಿನ ಮುಖ್ಯಮಂತ್ರಿ ಆಗಲಿ : ಈಶ್ವರಪ್ಪ.

89
firstsuddi

ಚಿಕ್ಕಮಗಳೂರು: ಮುಂದಿನ ಮುಖ್ಯಮಂತ್ರಿ ಸಿ.ಟಿ ರವಿ ಆಗಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇಂಗಿತ ವ್ಯಕ್ತಪಡಿಸಿದರು.

ಕಡೂರು ತಾಲೂಕಿನ ನಿಡಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರೋದು ನಮ್ಮ ಹೆಮ್ಮೆ. ಸಿ.ಟಿ ರವಿ, ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ. ಚಿಕ್ಕಮಗಳೂರಿನಿಂದ ಸಿ.ಟಿ ರವಿ ಅವರನ್ನು ಗೆಲ್ಲಿಸಿ, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.

ದೇಶದ್ರೋಹಿ ಮುಸ್ಲಿಮರ ಮತ ನಮಗೆ ಬೇಕಿಲ್ಲ. ಇದನ್ನು ನಿನ್ನೆಯೂ ಹೇಳಿದ್ದೇನೆ. ಇಂದು ಹಾಗೂ ನಾಳೆಯೂ ಇದನ್ನೇ ಪುನರುಚ್ಚರಿಸುತ್ತೇನೆ. ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿ ಜೊತೆಯೇ ಇದ್ದಾರೆ. ಸಿದ್ದು-ಡಿಕೆಶಿ ಬಿಜೆಪಿಯನ್ನ ಜಾತಿವಾದಿ ಅಂತಾರೆ. ಒಕ್ಕಲಿಗರು ನನ್ನ ಹಿಂದೆ ಬನ್ನಿ ನಾನು ಸಿಎಂ ಆಗುತ್ತೇನೆ ಅಂತಾರೆ ಡಿಕೆಶಿ, ಸಿದ್ದರಾಮಯ್ಯನವರೂ ಅದೇ ರೀತಿ ಮಾತನಾಡುತ್ತಾರೆ. ಸಿದ್ದು-ಡಿಕೆಶಿ ನೇರವಾಗಿ ಜಾತಿ ರಾಜಕಾರಣ ಮಾಡ್ತಿದ್ದಾರೆ. ಬಿಜೆಪಿಗೆ ಕೋಮುವಾದಿ ರಾಜಕಾರಣ ಅಂತಾರೆ ಎಂದು ಕಿಡಿಕಾರಿದರು.

ನಿನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿ.ಟಿ ರವಿ, ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು.